
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಂಗ್ರೆಯ ಅಳ್ಳೆಕೋಡಿಯಲ್ಲಿ ಕಪ್ಪೆ ಚಿಪ್ಪು ಆರಿಸಲು ಹೋಗಿ, ಭಾರಿ ಮಳೆಯಿಂದಾಗಿ ನದಿಯ ನೀರಿನ ಮಟ್ಟ ದಿಢೀರ್ ಏರಿಕೆಯಾಗಿ ಎಂಟು ಜನ ದುರ್ಮರಣಕ್ಕೀಡಾಗಿರುವ ಘಟನೆ ಅತ್ಯಂತ ಹೃದಯವಿದ್ರಾವಕವಾಗಿದೆ. ಮೃತರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಅವರ ಕುಟುಂಬದವರಿಗೆ ಈ ಅಪಾರ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಮುಂಗಾರು ಮಳೆಯ ಅಬ್ಬರ ಹೆಚ್ಚಾಗಿರುವುದರಿಂದ ಸಾರ್ವಜನಿಕರು ಹಾಗೂ ನದಿ ಪಾತ್ರದ ನಿವಾಸಿಗಳು ನದಿ, ಹಳ್ಳ-ಕೊಳ್ಳಗಳಿಗೆ ಇಳಿಯುವಾಗ ಹೆಚ್ಚಿನ ಜಾಗರೂಕತೆ ವಹಿಸಬೇಕಾಗಿ ವಿನಂತಿಸುತ್ತೇನೆ.
#BhatkalTragedy #TerribleTragedy #Condolence #BhatkalNews #UttaraKannada
ಕನ್ನಡ





























