
ಇಂದು ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಉಪ ಪೊಲೀಸ್ ಆಯುಕ್ತರಾದ (DCP) ಶ್ರೀ ಎಂ. ನಾರಾಯಣ, ಐಪಿಎಸ್ ಅವರು ELCIA (Electronics City Industries Association) ಸಂಸ್ಥೆಗೆ ಭೇಟಿ ನೀಡಿ, ಅಲ್ಲಿನ ಆಡಳಿತ ಮಂಡಳಿಯೊಂದಿಗೆ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯವೈಖರಿ, ಕೈಗಾರಿಕಾ ವಲಯದ ಭದ್ರತಾ ವ್ಯವಸ್ಥೆ, ಸಾರ್ವಜನಿಕ ಸುರಕ್ಷತೆ ಹಾಗೂ ಎದುರಾಗುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಅವುಗಳಿಗೆ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳುವ ಕುರಿತು ಅಭಿಪ್ರಾಯ ವಿನಿಮಯ ನಡೆಸಲಾಯಿತು.

ಕನ್ನಡ























