

DK Shivakumar
14.3K posts

@DKShivakumar
Congressman | Deputy Chief Minister- Karnataka | President- Karnataka Congress








ಬಿಜೆಪಿ ದೇಶಕ್ಕೆ ಕೊಟ್ಟಿದ್ದು ಬೆಲೆ ಏರಿಕೆ - ಕಾಂಗ್ರೆಸ್ ಕೊಟ್ಟಿದ್ದು ಗ್ಯಾರಂಟಿ ಕೇಂದ್ರ ಸರ್ಕಾರವು ಪೆಟ್ರೋಲ್ ಸೇರಿದಂತೆ ಇನ್ನಿತರ ಇಂಧನಗಳ ಬೆಲೆ ಏರಿಕೆ ಮಾಡುತ್ತಿರುವುದನ್ನು ಖಂಡಿಸಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಹಾಗೂ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರೊಂದಿಗೆ ಜಂಟಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದೆ. ಕೇಂದ್ರದ ಮೋದಿ ಸರ್ಕಾರ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಿದ್ದರೆ, ನಾವು ಜನರಿಗೆ ನೆರವಾಗಲು ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದ್ದೇವೆ. ಒಂದು ವೇಳೆ ನಾವು ಈ ಗ್ಯಾರಂಟಿಗಳನ್ನು ನೀಡದೇ ಇದ್ದಿದ್ದರೆ, ಈ ಭೀಕರ ಬೆಲೆ ಏರಿಕೆಯ ಸಂದರ್ಭದಲ್ಲಿ ಸಾಮಾನ್ಯ ಜನರ ಪರಿಸ್ಥಿತಿ ಏನಾಗುತ್ತಿತ್ತು ಎಂದು ಊಹಿಸಿಕೊಳ್ಳಲೂ ಸಾಧ್ಯವಿಲ್ಲ. ಸಿಲಿಂಡರ್ ಬೆಲೆ ಏರಿಕೆಯಿಂದಾಗಿ ಈಗಾಗಲೇ ಅರ್ಧದಷ್ಟು ಹೋಟೆಲ್‌ಗಳು ಮುಚ್ಚಿಹೋಗಿವೆ. ಸಿಲಿಂಡರ್ ಬೆಲೆಯನ್ನು ಹಂತ ಹಂತವಾಗಿ ಹೆಚ್ಚಿಸುತ್ತಾ ಬಂದಿರುವುದರಿಂದ, ಇಂದು ಹೋಟೆಲ್ ಉದ್ಯಮಿಗಳ ಹಾಗೂ ಜನಸಾಮಾನ್ಯರ ಬದುಕು ಅತ್ಯಂತ ಕಷ್ಟಕರವಾಗಿದೆ. ಕಳೆದ 12 ವರ್ಷಗಳಲ್ಲಿ ಕೇಂದ್ರದ ಮೋದಿ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ರೂಪದಲ್ಲೇ ಬರೋಬ್ಬರಿ 43 ಲಕ್ಷ ಕೋಟಿ ರೂಪಾಯಿ ಹಣವನ್ನು ಜನರ ಜೇಬಿನಿಂದ ಕಲೆಕ್ಟ್ ಮಾಡಿದೆ. ಮೇ 26, 2014ರಂದು ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಆಡಳಿತವಿದ್ದಾಗ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 71.41 ರೂ. ಹಾಗೂ ಡೀಸೆಲ್ ಬೆಲೆ 56.71 ರೂ. ಇತ್ತು. ಆದರೆ ಇಂದು ಮೋದಿ ಆಡಳಿತದಲ್ಲಿ ಪೆಟ್ರೋಲ್ ಬೆಲೆ 110 ರೂ. ಮತ್ತು ಡೀಸೆಲ್ ಬೆಲೆ 98 ರೂ. ದಾಟಿದೆ. ಅದರಲ್ಲೂ ಕಳೆದ ಹನ್ನೊಂದು ದಿನಗಳಲ್ಲಿ ಮೋದಿ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ ಬರೋಬ್ಬರಿ 7.50 ರೂಪಾಯಿಗೂ ಹೆಚ್ಚು ಏರಿಕೆ ಮಾಡುವ ಮೂಲಕ ಸಾರ್ವಜನಿಕರ ಉಳಿತಾಯಕ್ಕೆ ಕೊಳ್ಳಿ ಇಟ್ಟಿದೆ. ಹೀಗೆ ಹಂತ ಹಂತವಾಗಿ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರಕ್ಕೆ ಯಾವುದೇ ಮಾನ ಮರ್ಯಾದೆ ಇಲ್ಲ. "ರಾಜ್ಯ ಸರ್ಕಾರ ಇಂಧನದ ಮೇಲಿನ ತೆರಿಗೆಯನ್ನು ಕಡಿಮೆ ಮಾಡಬೇಕು" ಎಂದು ಕರ್ನಾಟಕದ ಕೆಲ ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಆದರೆ, ಮೊದಲು ಕೇಂದ್ರ ಸರ್ಕಾರದವರು ಬೆಲೆ ಕಡಿಮೆ ಮಾಡಲಿ. ಅದನ್ನು ಬಿಟ್ಟು ನಮಗೆ ತೆರಿಗೆ ಕಡಿಮೆ ಮಾಡಿ ಎಂದು ಹೇಳುತ್ತಿರುವುದು ಎಷ್ಟು ಸರಿ? ಇಂದು ಅಡುಗೆ ಎಣ್ಣೆ ಬೆಲೆಯೂ ಸಹ ಗಗನಕ್ಕೇರಿದೆ. ಈ ಬೆಲೆ ಏರಿಕೆಯ ವಿರುದ್ಧ ಮೇ 30ರಂದು ನಾವು ಪ್ರತಿ ಜಿಲ್ಲೆಯಲ್ಲೂ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ. ಆನಂತರ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಪ್ರತಿಭಟನೆ ನಡೆಸಲಿದ್ದೇವೆ. ಜನರೇ ಈ ಕೇಂದ್ರ ಸರ್ಕಾರವನ್ನು ಕಿತ್ತೊಗೆಯುವ ಕೆಲಸ ಮಾಡಬೇಕಿದೆ. ಜನರಿಗೆ ತೊಂದರೆ ಕೊಡಬೇಕೆಂದೇ ಕೇಂದ್ರ ಸರ್ಕಾರ ಈ ರೀತಿಯಾಗಿ ಬೆಲೆ ಏರಿಕೆ ಮಾಡುತ್ತಿದೆ. ಜನರ ಲೂಟಿ ಮಾಡುವುದನ್ನು ನಿಲ್ಲಿಸಲು ಈ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯಲೇಬೇಕು. ಇಂದು ಜನರ ಆದಾಯ ಪಾತಾಳಕ್ಕೆ ಕುಸಿಯುತ್ತಿದ್ದರೆ, ಅಗತ್ಯ ವಸ್ತುಗಳ ಬೆಲೆಗಳು ಮಾತ್ರ ಗಗನಕ್ಕೆ ಮುಟ್ಟುತ್ತಿವೆ. #PriceHike | #Petrol



ಎಸ್.ಐ.ಆರ್ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ನಾವು ಮಾಡುತ್ತೇವೆ ಇಂದು ಕೆಪಿಸಿಸಿ ವತಿಯಿಂದ ಬೆಂಗಳೂರಿನ ಹೊರವಲಯದಲ್ಲಿ ಹಮ್ಮಿಕೊಂಡಿದ್ದ ಎಸ್.ಐ.ಆರ್ ಪ್ರಕ್ರಿಯೆ, ಜಿಬಿಎ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ, ಪಕ್ಷ ಸಂಘಟನೆ ಕುರಿತ ಪೂರ್ವಭಾವಿ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಹಾಗೂ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಭಾಗವಹಿಸಿದೆ. ಈ ಸಂದರ್ಭದಲ್ಲಿ ಸಚಿವರಾದ ಎಚ್.ಕೆ. ಪಾಟೀಲ್, ಜಿ. ಪರಮೇಶ್ವರ, ಕೆ.ಜೆ. ಜಾರ್ಜ್, ಕೆ.ಎಚ್. ಮುನಿಯಪ್ಪ, ಎಂ.ಬಿ. ಪಾಟೀಲ್, ಈಶ್ವರ್ ಖಂಡ್ರೆ, ಶರಣ್ ಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ ಸೇರಿದಂತೆ ಸಚಿವರು, ಶಾಸಕರು, ಕೆಪಿಸಿಸಿ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.


































