

Priya.H /ಪ್ರಿಯಾ.ಹೆಚ್
1.1K posts




ಇಂದು ಸಚಿವ ಸಂಪುಟ ಸಭೆಯ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದೆ. ಈ ಸಂದರ್ಭದಲ್ಲಿ ನನ್ನ ಮಾತುಗಳ ಸಾರಾಂಶ: · ಆರ್‌ಸಿಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದು:ಖಕರವಾಗಿದ್ದು, ಮೃತಪಟ್ಟವರಿಗೆ ಮತ್ತೊಮ್ಮೆ ಸಂತಾಪ ಸೂಚಿಸುತ್ತಿದ್ದೇನೆ. ಇಂದು ಎಂದಿನಂತೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ನಿನ್ನೆ ನಡೆದ ಅಹಿತಕರ ಘಟನೆ ಬಗ್ಗೆ ಚರ್ಚಿಸಿ ಕೆಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. · ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರಾದ ಜಸ್ಟೀಸ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಿ, ತನಿಖೆ ನಡೆಸಲಾಗುತ್ತದೆ. · ಆರ್.ಸಿ.ಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್‌ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿದೆ. ಇವರ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ. · ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ, ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು ತಕ್ಷಣದಿಂದ ಅಮಾನತ್ತುಗೊಳಿಸಲು ತೀರ್ಮಾನಿಸಲಾಗಿದೆ. ಈ ದುರಂತಕ್ಕೆ ಸಂಬಂಧಪಟ್ಟ ಚರ್ಚೆಯ ನಂತರ ತೆಗೆದುಕೊಂಡ ತೀರ್ಮಾನಗಳಾಗಿವೆ. ಉಪಮುಖ್ಯಮಂತ್ರಿಗಳು, ಗೃಹಸಚಿವರು, ಸಚಿವರಾದ ಎಚ್.ಕೆ.ಪಾಟೀಲ್, ಸುಧಾಕರ್, ಮಹಾದೇವಪ್ಪ ಸೇರಿದಂತೆ ಹಿರಿಯ ಅಧಿಕಾರಿಗಳು ಚರ್ಚೆಯಲ್ಲಿ ಭಾಗವಹಿಸಿದ್ದರು. · ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡುಬರುತ್ತಿದ್ದು, ಇವರುಗಳನ್ನು ಅಮಾನತ್ತುಗೊಳಿಸಲು ತೀರ್ಮಾನಿಸಲಾಗಿದೆ. · ನಾನು ಶಾಸಕರು, ಸಚಿವ, ಡಿಸಿಎಂ ಹಾಗೂ ಮುಖ್ಯಮಂತ್ರಿಯಾದ ನಂತರ ಇಂತಹ ಘಟನೆ ನಡೆದಿರಲಿಲ್ಲ. ಈ ಘಟನೆ ನನ್ನನ್ನು ಘಾಸಿಗೊಳಿಸಿದೆ. ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬದವರ ಜೊತೆ ಸರ್ಕಾರವಿದೆ ಎನ್ನುವ ಭರವಸೆಯನ್ನು ಕೂಡ ನೀಡಬಯಸುತ್ತೇನೆ. ನಿನ್ನೆ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮೂರು ಸಂಸ್ಥೆಗಳ ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.




















Our Honour & Privilege, Presenting the Epic Saga of India’s Greatest Warrior King – The Pride of Bharat: #ChhatrapatiShivajiMaharaj. #ThePrideOfBharatChhatrapatiShivajiMaharaj This isn’t just a film – it’s a battle cry to honor a warrior who fought against all odds, challenged the might of the Mighty Mughal empire, and forged a legacy that can never be forgotten. Get ready for a Magnum Opus Action Drama, a cinematic experience unlike any other, as we unfold the untold story of #ChhatrapatiShivajiMaharaj Global Release on 21st January 2027 हर हर महादेव 🚩🇮🇳 @thisissandeeps













