
Satish
3.4K posts

Satish
@Satishvts
Humbled to be followed by captain manivannan






























ಬೆಂಗಳೂರಿನಿಂದ ಮುಂಬೈಗೆ ನೂತನ ವಂದೇ ಭಾರತ್ ಸ್ಲೀಪರ್ ರೈಲು ಆರಂಭಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಈ ರೈಲು ಬೆಂಗಳೂರಿನಿಂದ ಕಲ್ಯಾಣ ಕರ್ನಾಟಕದ ಮಾರ್ಗವಾಗಿ ಸಂಚರಿಸಲು ನನ್ನ ಮನವಿಗೆ ಸ್ಪಂದಿಸಿ, ನೂತನ ವಂದೇ ಭಾರತ್ ಸ್ಲೀಪರ್ ರೈಲು ಕೆ ಎಸ್ ಆರ್ ಬೆಂಗಳೂರು ನಿಲ್ದಾಣದಿಂದ ಕಲ್ಯಾಣ ಕರ್ನಾಟಕದ ಮೂಲಕ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್ ಗೆ ಸಂಚರಿಸಲಿದೆ . ಹಾಗೂ, ಬೆಂಗಳೂರಿನಿಂದ ಕರ್ನಾಟಕದ ಮಧ್ಯಭಾಗವಾದ ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಾರ್ಗದ ಮೂಲಕ ವಾಣಿಜ್ಯ ನಗರಿ ಮುಂಬೈಗೆ ತೆರಳಲು ಬೆಂಗಳೂರು-ಮುಂಬೈ ಸೂಪರ್ ಫಾಸ್ಟ್ ರೈಲಿಗೆ ನನ್ನ ಮನವಿಯ ಮೇರೆಗೆ ಈಗಾಗಲೇ ಅನುಮೋದನೆ ನೀಡಲಾಗಿತ್ತು. ಈ ಸೂಪರ್ ಫಾಸ್ಟ್ ರೈಲನ್ನು ಶೀಘ್ರವೇ ಪ್ರಾರಂಭಿಸುವುದಾಗಿ, ತದನಂತರದ ದಿನಗಳಲ್ಲಿ ವಂದೇ ಭಾರತ್ ಸ್ಲೀಪರ್ ರೈಲಾಗಿ ಬದಲಾಯಿಸುವಂತೆ ನನ್ನ ಪ್ರಸ್ತಾವನೆಯನ್ನು ಸಕಾರಾತ್ಮಕವಾಗಿ ಪರಿಗಣಿಸುವುದಾಗಿ ಹೇಳಿರುವ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ @AshwiniVaishnaw ಅವರಿಗೆ ರಾಜ್ಯದ ಪರವಾಗಿ ಧನ್ಯವಾದಗಳು. ರಾಜ್ಯದ ಅಭಿವೃದ್ದಿಯ ಜೊತೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಮತ್ತಷ್ಟು ಹೆಚ್ಚಿನ ಮಹತ್ವ ಹಾಗೂ ರಾಜ್ಯದಲ್ಲಿನ ವಾಣಿಜ್ಯ ಚಟುವಟಿಕೆಗಳನ್ನು ಹೆಚ್ಚಿಸುವುದರ ಜೊತೆಗೆ ಉತ್ತಮ ಸಂಚಾರ ಸೌಲಭ್ಯವನ್ನು ಈ ನೂತನ ವಂದೇ ಭಾರತ್ ರೈಲು ಬಲವರ್ಧಿಸಲಿದೆ. ನೂತನ ವಂದೇ ಭಾರತ್ ಸ್ಲೀಪರ್ ರೈಲನ್ನು ಐಟಿ ಸಿಟಿ ಬೆಂಗಳೂರು - ವಾಣಿಜ್ಯ ನಗರಿ ಮುಂಬೈ ಮಧ್ಯೆ ಸಂಚಾರಕ್ಕೆ ಅನುವು ಮಾಡಿಕೊಟ್ಟ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ @narendramodi, ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್, ರೈಲ್ವೆ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ @VSOMANNA_BJP ಅವರಿಗೆ ಅನಂತ ಧನ್ಯವಾದಗಳು. #VandeBharat













