ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ನಿಧನರಾದ ಸುದ್ದಿ ತಿಳಿದು ದುಃಖವಾಯಿತು.ಈ ಹಿಂದೆ ದಾವಣಗೆರೆಯ ಜಿಲ್ಲಾಧಿಕಾರಿಯಾಗಿ ಅವರು ಪ್ರಾಮಾಣಿಕ ಸೇವೆ ಸಲ್ಲಿಸಿದ್ದರು. ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ. ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು.
ಭಾರತದ ಮೊದಲ ಮಹಿಳಾ ಪ್ರಧಾನಿ, ಉಕ್ಕಿನ ಮಹಿಳೆ, ಭಾರತ ರತ್ನ ಶ್ರೀಮತಿ ಇಂದಿರಾ ಗಾಂಧಿ ಅವರ ಜಯಂತಿಯಂದು ಗೌರವ ನಮನಗಳು
ತಮ್ಮ ದಿಟ್ಟ ನಿರ್ಧಾರಗಳ ಮೂಲಕ ಬಡವರ, ಶೋಷಿತರ ಹಾಗೂ ದುರ್ಬಲ ವರ್ಗದವರ ಬದುಕಿಗೆ ಹೊಸ ಆಯಾಮ ನೀಡಿದ ಧೀಮಂತ ನಾಯಕಿಯ ಕೊಡುಗೆಗಳು ಸದಾ ಸ್ಮರಣೀಯ.
#indiragandhi
ವೃಕ್ಷಮಾತೆ ಎಂದೇ ಹೆಸರಾಗಿದ್ದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕನವರು ನಿಧನರಾದ ಸುದ್ದಿ ತಿಳಿದು ದುಃಖವಾಯಿತು.
ಜನಮಾನಸದಲ್ಲಿ ಸದಾ ಹಸಿರಾಗಿರುವ ತಿಮ್ಮಕ್ಕನವರ ಆತ್ಮವು ಅವರು ನೆಟ್ಟು ಬೆಳೆಸಿದ ಮರಗಿಡಗಳಂತೆ ತಂಪಾಗಿರಲಿ. ದೇವರು ಅವರ ಕುಟುಂಬದ ಸದಸ್ಯರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿ
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಾವಣಗೆರೆ ಮಾರ್ಗವಾಗಿ ನೂತನ ಬಸ್ ಸೌಲಭ್ಯ ಕಲ್ಪಿಸಲಾಗಿದೆ.
ದಾವಣಗೆರೆಯಿಂದ ಫ್ಲೈಬಸ್ (ವೋಲ್ವೋ ಮಲ್ಟಿ ಆಕ್ಸೆಲ್) ಸೇವೆ ಪ್ರಾರಂಭವಾಗಿದೆ. ಪ್ರಯಾಣಿಕರಿಗೆ ಉಚಿತವಾಗಿ ನಂದಿನಿ ಉತ್ಪನ್ನಗಳ ಸ್ನ್ಯಾಕ್ಸ್ ವಿತರಣೆ ಲಭ್ಯವಿದೆ.
ಮಾಜಿ ಸಚಿವರು,ಹಿರಿಯ ನಾಯಕರು ಹಾಗೂ ಹಾಲಿ ಶಾಸಕರಾಗಿದ್ದ ಶ್ರೀ ಹೆಚ್.ವೈ.ಮೇಟಿ ಅವರ ನಿಧನದ ವಿಷಯ ತಿಳಿದು ಅಪಾರ ದುಃಖವಾಯಿತು.
ಶ್ರೀಯುತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಭಗವಂತನು ಅವರ ಸಾವಿನ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬ ವರ್ಗದವರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ದೇಶದ ಸ್ಥಾನಿಕ ಭಾಷೆ ಕನ್ನಡಕ್ಕೆ ಎಂಟು ಜ್ಞಾನಪೀಠ ಪುರಸ್ಕಾರ ದೊರಕಿದ್ದು ಇಂತಹ ಭಾಷೆಯ ಉತ್ಸವ ಇಂದು ನಾವೆಲ್ಲರೂ ಸಡಗರ ಸಂಭ್ರಮದಿಂದ ಆಚರಿಸೋಣ.
ಕನ್ನಡ ನಾಡಿನ ಪ್ರತಿಯೊಬ್ಬರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು
#kannadarajyothsava
ಗಣರಾಜ್ಯದ ಸ್ಥಾಪನೆಯ ರೂವಾರಿ, ಭಾರತದ ಉಕ್ಕಿನ ಮನುಷ್ಯ ಶ್ರೀ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದಂದು ಅನಂತ ನಮನಗಳು.
ಶ್ರೀಯುತರ ಚಿಂತನೆಗಳು ಭಾರತದ ಪ್ರಗತಿ ಪಥದಲ್ಲಿ ಸದಾ ಅವಿಸ್ಮರಣೀಯ..
#SardarVallabhbhaiPatel
ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ, ಉಕ್ಕಿನ ಮಹಿಳೆ, ಭಾರತ ರತ್ನ ಶ್ರೀಮತಿ ಇಂದಿರಾ ಗಾಂಧಿಯವರ ಪುಣ್ಯ ಸ್ಮರಣೆಯಂದು ಶ್ರದ್ಧಾಪೂರ್ವಕ ನಮನಗಳು.
ಬ್ಯಾಂಕುಗಳ ರಾಷ್ಟ್ರೀಕರಣ, ಹಸಿರು ಕ್ರಾಂತಿಯ ಮೂಲಕ ಭಾರತದ ಆರ್ಥಿಕಾಭಿವೃದ್ಧಿಗೆ ಮುನ್ನುಡಿ ಬರೆದ ದಿಟ್ಟ ನಾಯಕಿ ಇಂದಿರಾ ಗಾಂಧಿ ಅವರು ಭಾರತೀಯರ ಹೃದಯದಲ್ಲಿ ಸದಾ ಅಜರಾಮರ.
#indiragandhi
ಖ್ಯಾತ ನಟ, ಕರ್ನಾಟಕ ರತ್ನ, ಪವರ್ ಸ್ಟಾರ್ ಶ್ರೀ ಪುನೀತ್ ರಾಜ್‌ಕುಮಾರ್ ಅವರ ಪುಣ್ಯಸ್ಮರಣೆಯಂದು ಪ್ರೀತಿಪೂರ್ವಕ ನಮನಗಳು.
ಪುನೀತ್ ರಾಜ್ ಕುಮಾರ್ ಅವರು ದೈಹಿಕವಾಗಿ ನಮ್ಮೊಂದಿಗೆ ಇಲ್ಲವಾದರೂ ಒಳ್ಳೆಯದನ್ನು ಬಯಸುವ ಪ್ರತೀ ಹೃದಯದಲ್ಲೂ ಜೀವಂತವಾಗಿದ್ದಾರೆ.
#punithrajkumar
ದಾವಣಗೆರೆಯ ಗೃಹ ಕಚೇರಿ ಮತ್ತು ಅಖಿಲ ಭಾರತ ವೀರಶೈವ ಮಹಾಸಭಾದ ಕಚೇರಿಯಲ್ಲಿ ಇಂದು ವಿವಿಧ ವಿಷಯಗಳ ಬಗ್ಗೆ ನಮ್ಮ ಹಿತೈಷಿಗಳೊಂದಿಗೆ ಚರ್ಚಿಸಲಾಯಿತು.
#ssworksforyou#shamanurshivashankarappa
ದಾವಣಗೆರೆ ನಗರದ ವಿವಿಧ ಕಡೆಗಳಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಏರ್ಪಡಿಸಿದ್ದ ಲಕ್ಷ್ಮಿ ಪೂಜೆ ಸಮಾರಂಭದಲ್ಲಿ ಭಾಗವಹಿಸಿ ತಮ್ಮ ವ್ಯವಹಾರಗಳು ವೃದ್ಧಿಸಲಿ ಎಂದು ಹಾರೈಸಿದೆನು.
#ssworksforyou#shamanurshivashankarappa
ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು.
ಬೆಳಕಿನ ಹಬ್ಬ ದೀಪಾವಳಿಯು ಪ್ರತಿಯೊಬ್ಬರ ಬದುಕಿನ ಸಂಕಷ್ಟಗಳನ್ನು ಕಳೆದು, ಪ್ರಗತಿಯ ಬೆಳಕು ಬದುಕಿನಲ್ಲಿ ಪಸರಿಸಲಿ.
ದೀಪಗಳ ಹಬ್ಬವು ತಮ್ಮೆಲ್ಲರ ಜೀವನದಲ್ಲಿ ಯಶಸ್ಸು, ಸಮೃದ್ಧಿ, ಐಶ್ವರ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
#diwalifestival#festivaloflights
ಎಸ್.ಎಸ್. ಕೇರ್ ಟ್ರಸ್ಟ್ ಹಾಗೂ ದಾವಣಗೆರೆ ಜಿಲ್ಲಾ ಆರೋಗ್ಯ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಶಾ ಕಾರ್ಯಕರ್ತೆಯರಿಗೆ ಪುನರ್‌ಮಾರ್ಗದರ್ಶನ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಾಗಾರವನ್ನು
ಎಸ್.ಎಸ್. ಕೇರ್ ಟ್ರಸ್ಟ್ ನ ಶೈಕ್ಷಣಿಕ ಸಭಾಂಗಣ, ಆಯೋಜಿಸಲಾಗಿತ್ತು.
ಕರ್ನಾಟಕ ಸರ್ಕಾರದ ಜನಪರ ಆಡಳಿತಕ್ಕೆ ಜಾಗತಿಕ ಮನ್ನಣೆ
ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತಕ್ಕಾಗಿ ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಿಂದ ಎರಡು ಐತಿಹಾಸಿಕ ಜಾಗತಿಕ ಮನ್ನಣೆ ದೊರೆತಿರುವುದು ಹೆಮ್ಮೆಯ ಸಂಗತಿ