Maheshwar Rao.M, IAS@GBAChiefComm
ಬೆಂಗಳೂರು ನಗರದಲ್ಲಿ ಮಹತ್ವಾಕಾಂಕ್ಷಿ ಯೋಜನೆಯಾದ ರಾಜಕಾಲುವೆ ಬಫರ್ ವಲಯದಲ್ಲಿ ರಸ್ತೆ ನಿರ್ಮಾಣ ಮಾಡುವ ಯೋಜನೆ ಕೈಗೆತ್ತಿಕೊಳ್ಳುತ್ತಿದೆ. ಅದರ ಭಾಗವಾಗಿ ಇಂದು ಆರ್‌ಆರ್ ನಗರ ವಲಯ ವ್ಯಾಪ್ತಿಯಲ್ಲಿ ರಾಜಕಾಲುವೆ ಬಫರ್ ವಲಯದಲ್ಲಿ ರಸ್ತೆ ನಿರ್ಮಿಸುವ ಸಲುವಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.
ಇದೇ ವೇಳೆ ಹೊಸಕೆರೆಹಳ್ಳಿ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ತ್ವರಿತಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಚನೆ ಅಧಿಕಾರಿಗಳಿಗೆ ನೀಡಲಾಯಿತು.
ಈ ವೇಳೆ ಬಿ.ಎಂ.ಆರ್.ಡಿ.ಎ ಆಯುಕ್ತರಾದ ರಾಜೇಂದ್ರ ಚೋಳನ್, ವಿಶೇಷ ಆಯುಕ್ತರಾದ ಕರೀಗೌಡ, ವಲಯ ಆಯುಕ್ತರಾದ ಸತೀಶ್, ಬಿಸ್ಮೈಲ್ ನ ತಾಂತ್ರಿಕ ನಿರ್ದೇಶಕರಾದ ಬಿ.ಎಸ್ ಪ್ರಹ್ಲಾದ್, ಮುಖ್ಯ ಅಭಿಯಂತರರಾದ ರಾಜೇಶ್, ಸ್ವಯಂಪ್ರಭಾ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
#BBMP #BBMPCares #DKShivakumar #bbmpchiefcommissioner #RRNagar