
Vishnu
1.8K posts

Vishnu
@bazzinga73lee
Engineer in Profession , Twitter for entertainment





ನಾಳೆ, ನಾಡಿದ್ದು ಎರಡು ದಿನ ಅಧಿಕಾರಿಗಳು ಪರಿಶೀಲನೆ ಮಾಡುತ್ತಾರೆ. ಜನವರಿ 1ರಂದು ಹೊಸ ವರ್ಷ ಪ್ರಾರಂಭದ ದಿನ ಇವರಿಗೆ ವಾಸಕ್ಕೆ ಮನೆಯನ್ನು ಒದಗಿಸಿಕೊಡುವ ಜವಾಬ್ದಾರಿಯನ್ನು ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರಿಗೆ ವಹಿಸಲಾಗಿದೆ. ಅಕ್ರಮವಾಗಿ ಮನೆ ಕಟ್ಟಿಕೊಂಡು ವಾಸ ಮಾಡುತ್ತಿದ್ದರೂ, ಮಾನವೀಯತೆ ದೃಷ್ಟಿಯಿಂದ ಅವರಿಗೆ ವಾಸಕ್ಕೆ ಪರ್ಯಾಯ ವ್ಯವಸ್ಥೆಯನ್ನು ಮಾಡುತ್ತಿದ್ದೇವೆ. 1 ಲಕ್ಷ ಮನೆಗಳನ್ನು ನಾವು ಕಟ್ಟಿಸಿರುವುದೇ ಬಡವರಿಗೆ ಸೂರು ಒದಗಿಸಿಕೊಡಲೆಂದು. ಅಕ್ರಮವಾಗಿ ಮನೆ ಕಟ್ಟಿಕೊಂಡಿರುವವರಿಗೆ ಸರ್ಕಾರದಿಂದಲೇ ಮನೆ ಕಟ್ಟಿಸಿಕೊಡುವುದು ಇದೊಂದು ಪ್ರಕರಣಕ್ಕೆ ಮಾತ್ರ ಅನ್ವಯವಾಗುತ್ತದೆ. ಅಕ್ರಮವಾಗಿ ಶೆಡ್ ನಿರ್ಮಿಸಲು ಬಿಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಇನ್ನು ಮುಂದೆ ಇಂತಹ ಅಕ್ರಮ ನಡೆದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. - ಕೋಗಿಲು ಬಡಾವಣೆಯ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್ ಗಳ ತೆರವಿಗೆ ಸಂಬಂಧಿಸಿದಂತೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ @siddaramaiah ಅವರ ಮಾತುಗಳು 3/3 #ಕೋಗಿಲುಬಡಾವಣೆ #ಒತ್ತುವರಿತೆರವು



