HSR LAYOUT BCP retweetledi

ಆಗ್ನೇಯ ವಿಭಾಗದ ಪೊಲೀಸ್ ಠಾಣೆಗಳ ವ್ಯಾಪ್ತಿಯ ಧಾರ್ಮಿಕ ಮುಖಂಡರೊಂದಿಗೆ ಶಾಂತಿ ಪಾಲನಾ ಸಭೆಯನ್ನು ನಡೆಸಲಾಯಿತು. ಮುಂಬರುವ #ಬಕ್ರೀದ್ ಹಬ್ಬವನ್ನು ಶಾಂತಿ, ಸೌಹಾರ್ದತೆ, ಮತ್ತು ಪರಸ್ಪರ ಗೌರವದೊಂದಿಗೆ ಆಚರಿಸುವಂತೆ ಮನವಿ ಮಾಡಲಾಯಿತು.
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ವದಂತಿಗಳು ಹಾಗೂ ಪ್ರಚೋದನಕಾರಿ ಸಂದೇಶಗಳನ್ನು ಹಂಚಿಕೊಳ್ಳದಂತೆ ಜಾಗೃತಿ ಮೂಡಿಸಿ, ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವ ಜೊತೆಗೆ ಪೊಲೀಸ್ ಇಲಾಖೆಯಿಂದ ಸೂಚಿಸಲಾದ ಭದ್ರತಾ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ಸಲಹೆ ಹಾಗೂ ಸೂಚನೆಗಳನ್ನು ನೀಡಲಾಯಿತು.
ಸಾರ್ವಜನಿಕರ ಸುರಕ್ಷತೆ ಮತ್ತು ಶಾಂತಿ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸದಾ ಬದ್ಧವಾಗಿದೆ. @DgpKarnataka @BlrCityPolice @jt_cpeastbcp #Bakrid2026 #PeaceMeeting #PublicSafety #ResponsibleSocialMedia #SouthEastDivision



ಕನ್ನಡ






































