Siddaramaiah

24.6K posts

Siddaramaiah banner
Siddaramaiah

Siddaramaiah

@siddaramaiah

ಕನ್ನಡಿಗ | Believer in equity & social justice | Family man | Chief Minister of Karnataka (2023- ,2013 - 2018)

Karnataka Entrou em Temmuz 2017
97 Seguindo1.1M Seguidores
Siddaramaiah
Siddaramaiah@siddaramaiah·
ದುಃಖದ ಕಹಿಬೇವು, ಸಂತಸದ ಸಿಹಿಬೆಲ್ಲ, ಈ ಎರಡನ್ನೂ ಸಮಚಿತ್ತದಿಂದ ಸ್ವೀಕರಿಸಿ, ಭರವಸೆಯೊಂದಿಗೆ ಮುನ್ನಡೆಯಬೇಕು ಎನ್ನುವುದೇ ಯುಗಾದಿಯ ಜೀವನ ಸಂದೇಶ. ಯುಗ ಪರಿವರ್ತನೆಯ ಸಂದೇಶದ ಯುಗಾದಿ ಹಬ್ಬ ಪ್ರತಿಯೊಬ್ಬರ ಬಾಳಲ್ಲಿ ಧನಾತ್ಮಕ ಬದಲಾವಣೆಯನ್ನು ಹೊತ್ತು ತರಲಿ. ಎಲ್ಲರಲ್ಲೂ ಹೊಸ ಉತ್ಸಾಹ, ಹೊಸ ಚಿಂತನೆ, ಹೊಸ ಭರವಸೆಗಳನ್ನು ತುಂಬಲಿ ಎಂದು ಹಾರೈಸುತ್ತೇನೆ. ನಾಡಬಾಂಧವರಿಗೆ ಯುಗಾದಿಯ ಶುಭಾಶಯಗಳು. #Yugadi #ಯುಗಾದಿ
Siddaramaiah tweet media
ಕನ್ನಡ
22
20
270
3.2K
Siddaramaiah
Siddaramaiah@siddaramaiah·
ಇಂದು ವಿಧಾನಸೌಧದಲ್ಲಿ ಕಲಬುರಗಿ ಜಿಲ್ಲೆಯ ಕೈಪಿಡಿಯನ್ನು ಬಿಡುಗಡೆಗೊಳಿಸಿದೆ. ಸಚಿವರಾದ ಶರಣಪ್ರಕಾಶ್‌ ಪಾಟೀಲ್, ಪ್ರಿಯಾಂಕ್ ಖರ್ಗೆ, ಕೆಕೆಆರ್‌ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಶಾಸಕರಾದ ಬಿ.ಆರ್.ಪಾಟೀಲ್, ಅಲ್ಲಮ ಪ್ರಭು ಪಾಟೀಲ್ ಸೇರಿ ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.‌
Siddaramaiah tweet mediaSiddaramaiah tweet mediaSiddaramaiah tweet mediaSiddaramaiah tweet media
ಕನ್ನಡ
3
14
57
2.1K
Siddaramaiah
Siddaramaiah@siddaramaiah·
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಕುಟುಂಬಕ್ಕೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.2 ಲಕ್ಷ ಪರಿಹಾರ ನೀಡಲಾಗುವುದು. ಇದೊಂದು ಅತ್ಯಂತ ದುರದೃಷ್ಟಕರ ಘಟನೆ. ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ಕನ್ನಡ
3
16
93
7.3K
Siddaramaiah
Siddaramaiah@siddaramaiah·
ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಸಂಬಂಧ ಇಂದು ದಿವಂಗತ ಎಚ್.ವೈ. ಮೇಟಿ ಅವರ ಪುತ್ರರಾದ ಮಲ್ಲಿಕಾರ್ಜುನ, ಉಮೇಶ್, ಪುತ್ರಿಯರಾದ ಬಾಯಕ್ಕ ಮತ್ತು ಮಹಾದೇವಿ ಅವರೊಂದಿಗೆ ಸಮಾಲೋಚನೆ ನಡೆಸಿ, ಅವರ ಅಭಿಪ್ರಾಯಗಳನ್ನು ಆಲಿಸಿದೆ.
Siddaramaiah tweet media
ಕನ್ನಡ
13
14
177
5.3K
Siddaramaiah
Siddaramaiah@siddaramaiah·
ನಮ್ಮ ಸರ್ಕಾರ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ವಿದ್ಯಾರ್ಥಿಸ್ನೇಹಿ ಸುಧಾರಣೆಗಳನ್ನು ಅಳವಡಿಸಿಕೊಂಡಿದೆ. ಮೂರು ಹಂತದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಒಂದು ವೇಳೆ ಮೊದಲ ಹಂತದ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದರೆ ಅಥವಾ ಅನುತ್ತೀರ್ಣರಾದರೆ ಎರಡನೇ ಹಂತ, ಮೂರನೇ ಹಂತದಲ್ಲಿ ಪರೀಕ್ಷೆ ಬರೆಯಲು ಅವಕಾಶ ಇರುವುದರಿಂದ ಯಾವುದೇ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗುವುದು ಬೇಡ. ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ. ಎಲ್ಲಾ ಮಕ್ಕಳಿಗೂ ಶುಭವಾಗಲಿ, ಉತ್ತಮ ಅಂಕಗಳ ಜೊತೆಗೆ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಹಾರೈಸುತ್ತೇನೆ.
ಕನ್ನಡ
9
15
84
2.4K
Siddaramaiah
Siddaramaiah@siddaramaiah·
The Railway Department has abruptly cancelled the promotion examinations scheduled to be held today for 194 Goods Train Manager posts in South Western Railway and 101 LDCE posts in the Hubballi division, placing Kannada employees in uncertainty. This follows strong opposition from Kannadigas and Kannada organisations. Thousands of Kannada employees had already raised objections over the lack of provision to write the examination in Kannada. Despite peaceful protests, the department failed to respond in time, cancelling the examinations at the last moment and leading to the present confusion. Had the department acted early and allowed the examination in Kannada, this situation could have been avoided. Instead, its indifferent approach and last-minute cancellation after protests intensified is condemnable. This is not the first instance, nor will it be the last, of Kannadigas facing injustice in central government examinations. Due to the continued imposition of Hindi in recruitment processes across central departments, Kannada candidates have long been subjected to unfair treatment. It is unfortunate that this has occurred even when Shri @VSOMANNA_BJP serves as Minister of State for Railways. I had expected that he would stand for Kannadigas and address this injustice, but that expectation has not been fulfilled. He must move beyond words and act in the interest of Karnataka. Kannadigas have already experienced the adverse impact of the Centre’s preference for Hindi and neglect of regional languages. Restricting central examinations to Hindi and English is unacceptable. India is a Union of States formed on linguistic foundations. We do not oppose Hindi, but we will not accept its imposition over Kannada. Kannadigas are not seeking employment or promotion as charity, but asserting their right in the language they were educated in. The Union Government must ensure that Kannada-speaking candidates are not subjected to such injustice. The Hon’ble Prime Minister Shri @narendramodi is urged to intervene and issue necessary directions. The cancelled examinations must be conducted at the earliest, with provision to write them in Kannada. #RailwaysExam #HindiImposition
English
11
71
309
12.7K
Siddaramaiah
Siddaramaiah@siddaramaiah·
ನೈರುತ್ಯ ರೈಲ್ವೇ ಇಲಾಖೆಯ 194 ಗೂಡ್ಸ್‌ ರೈಲು ಮ್ಯಾನೇಜರ್‌ ಹುದ್ದೆಗಳು ಹಾಗೂ ಹುಬ್ಬಳ್ಳಿ ವಿಭಾಗದಲ್ಲಿ ಎಲ್‌ಡಿಸಿಇ 101 ಹುದ್ದೆಗಳಿಗೆ ಮುಂಬಡ್ತಿ ನೀಡುವ ಸಂಬಂಧ ಇಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಕನ್ನಡಿಗರು ಹಾಗೂ ಕನ್ನಡ ಸಂಘಟನೆಗಳ ಭಾರೀ ವಿರೋಧದ ತರುವಾಯ ರೈಲ್ವೇ ಇಲಾಖೆಯು ದಿಢೀರನೇ ರದ್ದುಪಡಿಸಿ ಕನ್ನಡಿಗ ಉದ್ಯೋಗಿಗಳನ್ನು ಅತಂತ್ರ ಪರಿಸ್ಥಿತಿಗೆ ತಳ್ಳಿದೆ. ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡದಿರುವ ಬಗ್ಗೆ ಈ ಮೊದಲೇ ಸಾವಿರಾರು ಕನ್ನಡಿಗ ಉದ್ಯೋಗಿಗಳು ಧ್ವನಿಯೆತ್ತಿದ್ದರು. ಶಾಂತ ರೀತಿಯ ಪ್ರತಿಭಟನೆಯನ್ನು, ಪ್ರತಿರೋಧವನ್ನು ನಿರ್ಲಕ್ಷಿಸುತ್ತಾ ಬಂದ ರೈಲ್ವೆ ಇಲಾಖೆ ಪರೀಕ್ಷೆ ಆರಂಭವಾಗುವ ಕೊನೆ ಕ್ಷಣದಲ್ಲಿ ರದ್ದುಮಾಡಿರುವುದು ಈಗಿನ ಗೊಂದಲಕ್ಕೆ ಕಾರಣ. ಪ್ರಾರಂಭದಲ್ಲಿಯೇ ರೈಲ್ವೆ ಇಲಾಖೆ ಎಚ್ಚೆತ್ತುಕೊಂಡು ತನ್ನ ತಪ್ಪನ್ನು ತಿದ್ದಿಕೊಂಡು ಕನ್ನಡದಲ್ಲಿ ಪರೀಕ್ಷೆಗೆ ಅವಕಾಶ ಮಾಡಿಕೊಟ್ಟಿದ್ದರೆ ಈಗಿನ ಅತಂತ್ರ ಸ್ಥಿತಿ ನಿರ್ಮಾಣವಾಗುತ್ತಿರಲಿಲ್ಲ. ಆ ಪ್ರಯತ್ನವನ್ನೇ ಮಾಡದೆ, ಕನ್ನಡಿರನ್ನು ತಾತ್ಸಾರ ಭಾವನೆಯಿಂದ ಕಂಡು, ಪ್ರತಿಭಟನೆಯ ಕಾವು ಹೆಚ್ಚಾದ ಕೂಡಲೆ ತರಾತುರಿಯಲ್ಲಿ ಪರೀಕ್ಷೆ ರದ್ದುಪಡಿಸುವ ನಿರ್ಧಾರಕ್ಕೆ ಬಂದಿರುವುದು ಖಂಡನೀಯ. ಕನ್ನಡಿಗರಿಗೆ ಕೇಂದ್ರ ಸರ್ಕಾರದ ಪರೀಕ್ಷೆಗಳಲ್ಲಿ ಅನ್ಯಾಯವಾಗುತ್ತಿರುವುದು ಇದು ಮೊದಲ ಬಾರಿ ಅಲ್ಲ ಬಹುಷಃ ಕೊನೆಯದ್ದೂ ಅಲ್ಲ. ಕೇಂದ್ರದ ವಿವಿಧ ಇಲಾಖೆಗಳ ಉದ್ಯೋಗ ಭರ್ತಿಯಲ್ಲಿ ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯ ಕುಟಿಲತನದಿಂದಾಗಿ ಕನ್ನಡಿಗ ಉದ್ಯೋಗಾಕಾಂಕ್ಷಿಗಳು ಮೊದಲಿಂದಲೂ ಅನ್ಯಾಯಕ್ಕೆ ತುತ್ತಾಗುತ್ತಾ ಬಂದಿದ್ದಾರೆ. ಇದರ ವಿರುದ್ಧ ಕನ್ನಡಿಗರು ನ್ಯಾಯಕ್ಕಾಗಿ ಧ್ವನಿಯೆತ್ತುತ್ತಾ ಬಂದಿದ್ದಾರೆ. ಆದರೆ ಈ ಬಾರಿ ಕನ್ನಡಿಗರಾದ ವಿ.ಸೋಮಣ್ಣನವರು ರೈಲ್ವೆ ಇಲಾಖೆಯ ರಾಜ್ಯ ಸಚಿವರಾಗಿರುವಾಗಲೇ ರೈಲ್ವೆ ಇಲಾಖೆ ಕನ್ನಡ ವಿರೋಧಿ ನಿಲುವು ತಳೆದು ಕನ್ನಡ,‌ ಕರ್ನಾಟಕ ಮತ್ತು ಕನ್ನಡಿಗರಿಗೆ ಅನ್ಯಾಯ ಮಾಡಿರುವುದು ಅತ್ಯಂತ ದುರದೃಷ್ಟಕರ. ಸೋಮಣ್ಣನವರು ಕನ್ನಡಿಗರ ಪರವಾಗಿ ನಿಂತು ಅನ್ಯಾಯವನ್ನು ಸರಿಪಡಿಸುತ್ತಾರೆ ಎಂಬ ಭರವಸೆಯನ್ನು ನಾನೂ ಇಟ್ಟುಕೊಂಡಿದ್ದೆ, ಆ ನಂಬಿಕೆ ಹುಸಿಯಾಗಿದೆ. ಸೋಮಣ್ಣನವರು ಮಾತನಾಡಲು ಶುರು ಮಾಡಿದರೆ ರೈಲ್ವೆ ಇಲಾಖೆ ಇರುವುದೇ ಕರ್ನಾಟಕಕ್ಕಾಗಿ ಎನ್ನುವಂತೆ ಮಾತಿನ ಅರಮನೆ ಕಟ್ಟುತ್ತಾರೆ. ಅವರು ಮಾತು ಸ್ವಲ್ಪ ಕಡಿಮೆಮಾಡಿ ಕರ್ನಾಟಕಕ್ಕಾಗಿ‌ ಮಾಡಬೇಕಾದ ಕೆಲಸವನ್ನು ನಿಷ್ಠೆಯಿಂದ ಮಾಡಲು ಮುಂದಾಗಬೇಕು. ಕೇಂದ್ರ ಸರ್ಕಾರಕ್ಕೆ ಹಿಂದಿ ಭಾಷೆ ಮೇಲೆ ಇರುವ ಪ್ರೀತಿ ಮತ್ತು ಕನ್ನಡವೂ ಸೇರಿದಂತೆ ರಾಜ್ಯಭಾಷೆಗಳ ಮೇಲೆ ಇರುವ ತಾತ್ಸಾರ ಮನೋಭಾವದ ದುಷ್ಪರಿಣಾಮವನ್ನು ಕನ್ನಡಿಗರು ಈಗಾಗಲೇ ಅನುಭವಿಸಿದ್ದಾರೆ. ಉತ್ತರ ಭಾರತದ ಹಿಂದಿ ಭಾಷಿಗರಿಗೆ ನೆರವಾಗಬೇಕೆಂಬ ಏಕೈಕ ಉದ್ದೇಶದಿಂದ ಕೇಂದ್ರದ ಪರೀಕ್ಷೆಗಳಲ್ಲಿ ಹಿಂದಿ ಮತ್ತು ಇಂಗ್ಲೀಷ್‌ ಗೆ ಮಾತ್ರ ಅವಕಾಶ ನೀಡುವ ಕೇಂದ್ರದ ಭಾಷಾ ದಬ್ಬಾಳಿಕೆಯನ್ನು ಸಹಿಸಲು ಸಾಧ್ಯವೇ ಇಲ್ಲ. ಭಾರತ ರಾಜ್ಯಗಳ ಒಕ್ಕೂಟ, ಈ ರಾಜ್ಯಗಳು ಭಾಷೆಗಳ ಆಧಾರದಲ್ಲಿಯೇ ರಚನೆಯಾಗಿರುವುದನ್ನು ಮರೆಯಬಾರದು. ನಾವು ಹಿಂದಿಯನ್ನು ಭಾಷೆಯಾಗಿ ವಿರೋಧಿಸುವುದಿಲ್ಲ, ಹಿಂದಿಯನ್ನು ಕನ್ನಡದ ಮೇಲೆ ಹೇರುವುದನ್ನು ಮಾತ್ರ ಖಂಡಿತ ಸಹಿಸುವುದಿಲ್ಲ. ಆಳುವ ಪಕ್ಷದ ಸಂಸದರು ಪಕ್ಷದ ಮುಲಾಜಿಗೆ ಬಿದ್ದು ಕನ್ನಡಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತದೆ ಬಾಯಿ ಮುಚ್ಚಿಕೊಂಡಿರಬಹುದು, ಆದರೆ ಕನ್ನಡಿಗರು ಜಾಗೃತರಾಗಿದ್ದಾರೆ. ಕನ್ನಡಿಗರು ಉದ್ಯೋಗಕ್ಕಾಗಿ, ಭಡ್ತಿಗಾಗಿ ಕೇಂದ್ರದ ಮುಂದೆ ಭಿಕ್ಷೆಗೆ ನಿಂತಿಲ್ಲ, ತಾವು ಶಿಕ್ಷಣ ಪಡೆದ ಭಾಷೆಯಲ್ಲೇ ತಮ್ಮ ಹಕ್ಕಿನ ಉದ್ಯೋಗ ಭಡ್ತಿಯನ್ನು ಕೇಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕನ್ನಡ ಭಾಷಿಗರಿಗೆ ಭಾಷೆಯ ಹೆಸರಲ್ಲಿ ಅನ್ಯಾಯವಾಗದಂತೆ ಕೇಂದ್ರ ಸರ್ಕಾರ ನೋಡಿಕೊಳ್ಳಬೇಕು. ಪ್ರಧಾನಿ ನರೇಂದ್ರ ಮೋದಿ ಅವರೇ ಮಧ್ಯೆಪ್ರವೇಶಿಸಿ ಸಂಬಂಧಿತ ಇಲಾಖೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ರದ್ದುಪಡಿಸಲಾದ ರೈಲ್ವೆ ಇಲಾಖೆಯ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಅವಕಾಶ ಕಲ್ಪಿಸಿ ಶೀಘ್ರದಲ್ಲಿಯೇ ನಡೆಸಲು ಕ್ರಮಕೈಗೊಳ್ಳಬೇಕೆಂದು ಆಗ್ರಹಪಡಿಸುತ್ತೇನೆ. #hindiimposition #RailwayExams #Kannada
ಕನ್ನಡ
20
34
235
18.6K
Siddaramaiah
Siddaramaiah@siddaramaiah·
ಕಲಾ ಪ್ರತಿಭೆಯ ಜೊತೆಯಲ್ಲಿ ಸರಳತೆ, ಸಜ್ಜನಿಕೆ ಮತ್ತು ಸಮಾಜಮುಖಿ ಚಿಂತನೆಗಳಿಂದಾಗಿ ಎಳೆಯ ವಯಸ್ಸಿನಲ್ಲಿಯೇ ಎತ್ತರಕ್ಕೆ ಬೆಳೆದು ನಮ್ಮೆಲ್ಲರಲ್ಲಿ ಅಭಿಮಾನ ಮೂಡಿಸಿದ ಹುಡುಗ ಪುನೀತ್ ರಾಜ್‍ಕುಮಾರ್. ಪುನೀತ್ ಬದುಕಿನ ಹಾದಿ ಚಿಕ್ಕದು, ಆದರೆ ಅಲ್ಪಾಯುಷ್ಯದಲ್ಲಿಯೇ ತನ್ನ ನಡೆ-ನುಡಿಯ ಮೂಲಕ ಆತ ನೀಡಿರುವ ಜೀವನದ ಸಂದೇಶ ಸದಾ ಸ್ಮರಣೀಯ ಮತ್ತು ಸ್ಪೂರ್ತಿದಾಯಕ. ಪುನೀತ್ ಇಂದು ನಮ್ಮೆಲ್ಲರನ್ನು ರಂಜಿಸುತ್ತಾ, ಕನ್ನಡ ಚಿತ್ರರಂಗಕ್ಕೆ ಹೊಸ ಆಲೋಚನೆಗಳನ್ನು ತುಂಬುತ್ತಾ ನಮ್ಮ ಜೊತೆ ಇರಬೇಕಿತ್ತು ಎಂದು ಲೆಕ್ಕವಿಲ್ಲದಷ್ಟು ಸಲ ಅನ್ನಿಸಿದೆ. ಸಹಜ ಅಭಿನಯ, ಸನ್ನಡತೆಯಿಂದ ಕೋಟ್ಯಂತರ ಜನರ ಮನಗೆದ್ದ ಕನ್ನಡಿಗರ ಪ್ರೀತಿಯ ಅಪ್ಪುವಿನ‌‌ ಜನ್ಮದಿನದಂದು ಅವರ ಜೀವನಪ್ರೀತಿಯನ್ನು ನೆನೆದು, ನಮಿಸುತ್ತೇನೆ. #PuneethRajkumar
Siddaramaiah tweet media
ಕನ್ನಡ
10
129
1.1K
6.6K
Siddaramaiah
Siddaramaiah@siddaramaiah·
ಸಾಮಾನ್ಯ ಗ್ರಾಮದಲ್ಲಿ ಹುಟ್ಟಿ ಪಂಚಾಯತಿ ಸದಸ್ಯರಾಗಿ, ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ, ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಕೆ. ಎಚ್. ಪಾಟೀಲ್ ಅವರು ಸಹಕಾರಿ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಆಡು ಮುಟ್ಟದ ಸೊಪ್ಪಿಲ್ಲ ಎಂಬ ಗಾದೆ ಮಾತಿನಂತೆ ಸಹಕಾರಿ ಕ್ಷೇತ್ರದಲ್ಲಿ ಇವರು ಮಾಡದಿರುವ ಕೆಲಸವಿಲ್ಲ. ಸಹಕಾರಿ ಕ್ಷೇತ್ರ ಮಾತ್ರವಲ್ಲದೆ, ರಾಜಕೀಯ ಕ್ಷೇತ್ರದಲ್ಲಿಯೂ ತೊಡಗಿಸಿಕೊಂಡಿದ್ದರು. ದೇವರಾಜ ಅರಸು, ವೀರೇಂದ್ರ ಪಾಟೀಲ್ ಹಾಗೂ ಬಂಗಾರಪ್ಪ ಅವರ ಸಂಪುಟದಲ್ಲಿ ಸಚಿವರಾಗಿ ಸೇವೆ ಮಾಡಿದ್ದರು. ಕೆ.ಹೆಚ್.ಪಾಟೀಲರ ಸಂಪರ್ಕ ರಾಜಕೀಯವಾಗಿ ಕಡಿಮೆಯಿದ್ದರೂ ಅವರು ಸಚಿವರಾಗಿ ಮಾಡುತ್ತಿದ್ದ ಕೆಲಸವನ್ನು ಗಮನಿಸುತ್ತಿದ್ದೆ. ಓದು ಕಡಿಮೆಯಿದ್ದರೂ ಜನಪರವಾದ ಅಪಾರ ಕಾಳಜಿಯನ್ನು ಹೊಂದಿದ್ದರು. ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಬಡವರು, ದಲಿತರು, ಅಲ್ಪಸಂಖ್ಯಾತರಲ್ಲಿ ಶಕ್ತಿ ತುಂಬುವ ಕೆಲಸ ಮಾಡಿದ್ದನ್ನು ನಾವು ಸ್ಮರಿಸಲೇಬೇಕು. ಕೆ.ಎಚ್.ಪಾಟೀಲ್ ರ ಪುತ್ರ, ಸಚಿವರೂ ಆದ ಹೆಚ್.ಕೆ.ಪಾಟೀಲರು ಅವರ ತಂದೆಯವರು ನಡೆದ ದಾರಿಯಲ್ಲೇ ನಡೆಯುತ್ತಿದ್ದು, ಅವರಿಗಿಂತಲೂ ಹೆಚ್ಚು ಬೆಳೆಯಲಿ ಎಂದು ಹಾರೈಸುತ್ತೇನೆ. - ವಿಧಾನಸೌಧದಲ್ಲಿ ಇಂದು ಆಯೋಜಿಸಿದ್ದ ಸಹಕಾರಿ ರಂಗದ ಭೀಷ್ಮ ಕೆ ಎಚ್ ಪಾಟೀಲರ ಜಯಂತಿ ಸಮಾರಂಭದಲ್ಲಿ ನನ್ನ ಮಾತುಗಳು
Siddaramaiah tweet media
ಕನ್ನಡ
10
17
129
4.4K
Siddaramaiah
Siddaramaiah@siddaramaiah·
ಸಹಕಾರಿ ರಂಗದ ಭೀಷ್ಮ, ಜನಾನುರಾಗಿ ರಾಜಕಾರಣಿ ಕೆ ಎಚ್ ಪಾಟೀಲ್ ರ 101ನೇ ಜಯಂತೋತ್ಸವ ಸಮಾರಂಭವನ್ನು ಉದ್ಘಾಟಿಸಿ, ಪಾಟೀಲರ ಜೀವನ ಸಾಧನೆಗಳನ್ನು ಸ್ಮರಿಸಿದೆ. ಸಮಾರಂಭದಲ್ಲಿ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್, ಸಭಾಪತಿ ಬಸವರಾಜ ಹೊರಟ್ಟಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಎಚ್.ಕೆ.ಪಾಟೀಲ್, ಡಾ|| ಶರಣ ಪ್ರಕಾಶ್ ಪಾಟೀಲ್, ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯ್ಲಿ, ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
Siddaramaiah tweet mediaSiddaramaiah tweet mediaSiddaramaiah tweet mediaSiddaramaiah tweet media
ಕನ್ನಡ
5
13
78
2K
Siddaramaiah
Siddaramaiah@siddaramaiah·
2013 ರಿಂದ 2018 ಮತ್ತು 2023ರಿಂದ ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದೆ. ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಿಂದ ಇದುವರೆಗೆ ಮಹಿಳೆಯರು 700 ಕೋಟಿ ಬಾರಿ ಉಚಿತ ಪ್ರಯಾಣಗಳನ್ನು ಕೈಗೊಂಡಿದ್ದಾರೆ. ಮಹಿಳಾ ಕೇಂದ್ರಿತ ಯೋಜನೆಗಳಿಂದ ಮಹಿಳೆಯರ ಹಕ್ಕುಗಳನ್ನು ರಕ್ಷಿಸಲಾಗಿದೆ. ಸರ್ಕಾರದ ಗ್ಯಾರಂಟಿಗಳಿಂದ ಮಹಿಳೆಯರ ಕೊಂಡುಕೊಳ್ಳುವ ಶಕ್ತಿ ಹೆಚ್ಚಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 1.26 ಕೋಟಿ ಮಹಿಳೆಯರಿಗೆ ಮಾಸಿಕ 2,000 ರೂ.ಗಳನ್ನು ನೀಡಲಾಗುತ್ತಿದ್ದು, ಇದರಿಂದ ಮಹಿಳೆಯರ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿ ಸುಧಾರಿಸಿದೆ. ಆರ್ಥಿಕ ಸ್ವಾತಂತ್ರ್ಯದಿಂದ ಮಹಿಳೆಯರ ಆತ್ಮವಿಶ್ವಾಸ ಹೆಚ್ಚಿದೆ.
ಕನ್ನಡ
8
19
67
1.9K
Siddaramaiah
Siddaramaiah@siddaramaiah·
ಮಹಿಳಾ ಪರ ಬಜೆಟ್ ಗಾಗಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯಿತಿಯ ಮಹಿಳಾ ಅಧ್ಯಕ್ಷರು, ಸದಸ್ಯರು ಹಾಗೂ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ವತಿಯಿಂದ ಸನ್ಮಾನ ಸ್ವೀಕರಿಸಿದ ಕ್ಷಣ
ಕನ್ನಡ
4
10
55
1.8K
Siddaramaiah
Siddaramaiah@siddaramaiah·
2013 ರಿಂದ 2018 ಮತ್ತು 2023ರಿಂದ ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದೆ. ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಿಂದ ಇದುವರೆಗೆ ಮಹಿಳೆಯರು 700 ಕೋಟಿ ಬಾರಿ ಉಚಿತ ಪ್ರಯಾಣಗಳನ್ನು ಕೈಗೊಂಡಿದ್ದಾರೆ. ಮಹಿಳಾ ಕೇಂದ್ರಿತ ಯೋಜನೆಗಳಿಂದ ಮಹಿಳೆಯರ ಹಕ್ಕುಗಳನ್ನು ರಕ್ಷಿಸಲಾಗಿದೆ. ಸರ್ಕಾರದ ಗ್ಯಾರಂಟಿಗಳಿಂದ ಮಹಿಳೆಯರ ಕೊಂಡುಕೊಳ್ಳುವ ಶಕ್ತಿ ಹೆಚ್ಚಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 1.26 ಕೋಟಿ ಮಹಿಳೆಯರಿಗೆ ಮಾಸಿಕ 2,000 ರೂ.ಗಳನ್ನು ನೀಡಲಾಗುತ್ತಿದ್ದು, ಇದರಿಂದ ಮಹಿಳೆಯರ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿ ಸುಧಾರಿಸಿದೆ. ಆರ್ಥಿಕ ಸ್ವಾತಂತ್ರ್ಯದಿಂದ ಮಹಿಳೆಯರ ಆತ್ಮವಿಶ್ವಾಸ ಹೆಚ್ಚಿದೆ. ಮಹಿಳೆಯರಲ್ಲಿ ನಾಯಕತ್ವದ ಗುಣ ಬಹಳ ಮುಖ್ಯ. ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ನಲ್ಲಿ 1 ಲಕ್ಷಕ್ಕೂ ಹೆಚ್ಚು ಮಹಿಳಾ ಸದಸ್ಯರು ಇದ್ದು, ಭವಿಷ್ಯದಲ್ಲಿ ಈ ಸಂಖ್ಯೆ 2 ಲಕ್ಷಗಳಿಗೆ ವೃದ್ಧಿಸಬೇಕು. ಉಪಚುನಾವಣೆ ಸಮೀಸುತ್ತಿರುವುದರಿಂದ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಮಹಿಳಾ ಸದಸ್ಯರ ಪಾತ್ರ ಮಹತ್ವದ್ದಾಗಿದೆ. ಕಳೆದ ಬಾರಿ ಚೆನ್ನಪಟ್ಟಣ, ಶಿಗ್ಗಾಂವಿ , ಸಂಡೂರು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿತ್ತು. ಈ ಬಾರಿಯೂ ಎರಡೂ ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲೇಬೇಕಿದ್ದು , ಇದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಕಾಂಗ್ರೆಸ್ ಪಕ್ಷ ಮಾಡಿಕೊಂಡಿದೆ. ಎರಡೂ ಉಪಚುನಾವಣೆಯಲ್ಲಿ ಮಹಿಳಾ ಸದಸ್ಯರ ಎರಡು ತಂಡಗಳನ್ನು ರಚಿಸಿ, ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. - ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಇಂದು ಬೆಂಗಳೂರಿನಲ್ಲಿ ಆಯೋಜಿಸಿದ್ದ "executive meeting and training program" ನಲ್ಲಿ‌ ನನ್ನ ಮಾತುಗಳು
Siddaramaiah tweet media
ಕನ್ನಡ
13
20
96
2.2K
Siddaramaiah
Siddaramaiah@siddaramaiah·
ಇಂದಿರಾ ಲಂಕೇಶ್ ಪ್ರಕಾಶನವು ಭಾನುವಾರ ಕೊಂಡಜ್ಜಿ ಬಸಪ್ಪ ಸಭಾಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ "ಪಿ.ಲಂಕೇಶ್ ಅವರ ಟೀಕೆ ಟಿಪ್ಪಣಿ 3 ಭಾಗಗಳ ಪುಸ್ತಕ ಹಾಗೂ ಲಂಕೇಶರ ಕಥೆಗಳ ಆಡಿಯೊ ಬುಕ್ ಬಿಡುಗಡೆ ಮಾಡಿ ಮಾತನಾಡಿದೆ.
ಕನ್ನಡ
2
14
56
1.9K
Siddaramaiah
Siddaramaiah@siddaramaiah·
ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಇಂದು ಬೆಂಗಳೂರಿನಲ್ಲಿ ಆಯೋಜಿಸಿದ್ದ "executive meeting and training program" ನಲ್ಲಿ‌ ಪಾಲ್ಗೊಂಡು, ದೇಶದ ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ರಕ್ಷಣೆಯಲ್ಲಿ ಕಾಂಗ್ರೆಸ್ ನಾಯಕರ ತ್ಯಾಗ, ಬಲಿದಾನ ಹಾಗೂ ಕಾರ್ಯಕರ್ತರ ಹೊಣೆಗಾರಿಕೆಯನ್ನು ಸ್ಮರಿಸಿದೆ.
Siddaramaiah tweet mediaSiddaramaiah tweet mediaSiddaramaiah tweet mediaSiddaramaiah tweet media
ಕನ್ನಡ
4
13
129
3.1K
Siddaramaiah
Siddaramaiah@siddaramaiah·
ಯಲಬುರ್ಗಾ ವಿಧಾನಸಭಾ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಭರಪೂರ ಅನುದಾನ ಹಾಗೂ ಅಭಿವೃದ್ಧಿ ಯೋಜನೆಗಳನ್ನು ನೀಡಿ ಕ್ಷೇತ್ರದ ಮಹಿಳಾ ಸಬಲೀಕರಣಕ್ಕೆ ವ್ಯಾಪಕ ಬೆಂಬಲ ನೀಡಿರುವ ಹಿನ್ನೆಲೆಯಲ್ಲಿ ಇಂದು ಶಾಸಕರಾದ ಬಸವರಾಜ ರಾಯರೆಡ್ಡಿಯವರ ನೇತೃತ್ವದಲ್ಲಿ ಯಲಬುರ್ಗಾ ಗ್ರಾಮ ಪಂಚಾಯತಿಯ ಅಧ್ಯಕ್ಷರು ಹಾಗೂ ಮಹಿಳಾ ಸದಸ್ಯರು ನನ್ನನ್ನು ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಸನ್ಮಾನಿಸಿ, ನೆನಪಿನ ಕಾಣಿಕೆ ನೀಡಿ ಧನ್ಯವಾದ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಉಪಸ್ಥಿತರಿದ್ದರು.
Siddaramaiah tweet mediaSiddaramaiah tweet mediaSiddaramaiah tweet media
ಕನ್ನಡ
5
12
126
2.7K
Siddaramaiah
Siddaramaiah@siddaramaiah·
ಎಲ್‌ಪಿಜಿ ಅಭಾವವನ್ನು ನೀಗಿಸಲು ಹೊರದೇಶದಿಂದ ಅನಿಲ ಪೂರೈಕೆಯಂತಹ ಪರ್ಯಾಯ ಮಾರ್ಗಕ್ಕೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ವಿಧಾನಮಂಡಲದಲ್ಲಿ ಸರ್ಕಾರದ ವತಿಯಿಂದ ಈ ಬಗ್ಗೆ ಈಗಾಗಲೇ ಉತ್ತರ ನೀಡಲಾಗಿದೆ. ಆಹಾರಕ್ಕಾಗಿ ಹೋಟೆಲ್ ಗಳ ಮೇಲೆ ಅವಲಂಬಿತರಾಗುವ ಜನಸಂಖ್ಯೆ ಸಾಕಷ್ಟಿದೆ. ಹೋಟೆಲ್ ವ್ಯವಸ್ಥೆ ಸ್ಥಗಿತಗೊಂಡರೆ, ಜನಜೀವನ ಅಸ್ತವ್ಯಸ್ಥವಾಗುತ್ತದೆ. ಕೇಂದ್ರ ಸಚಿವ ಹರ್‌ದೀಪ್ ಸಿಂಗ್ ಪುರಿಯವರು ಎಲ್ ಪಿ ಜಿ ಪೂರೈಕೆಯಲ್ಲಿ ತೊಂದರೆಯಾಗದಂತೆ ಪರಿಸ್ಥಿತಿ ನಿರ್ವಹಿಸುವ ಭರವಸೆ ನೀಡಿದ್ದಾರೆ. ಕರ್ನಾಟಕದಲ್ಲಿ ಮಾತ್ರ ಎಲ್ ಪಿ ಜಿ ಪೂರೈಕೆಯಲ್ಲಿ‌ ಸಮಸ್ಯೆ ಎದುರಾಗಿರುವುದಲ್ಲ, ದೇಶದ ಎಲ್ಲ ಕಡೆಯೂ ಇದೇ ಪರಿಸ್ಥಿತಿ ಇದೆ. ರಾಜ್ಯ ಬಿಜೆಪಿಯವರು ಅರ್ಥವಿಲ್ಲದಂತೆ ಮಾತನಾಡುವ ಬದಲು, ಎಲ್ ಪಿ ಜಿ ಹೆಚ್ಚಿನ ಸರಬರಾಜಿಗೆ ಕ್ರಮ ವಹಿಸಲು ಕೇಂದ್ರವನ್ನು ಒತ್ತಾಯಿಸಲಿ. - ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ನನ್ನ ಪ್ರತಿಕ್ರಿಯೆ
Siddaramaiah tweet media
ಕನ್ನಡ
40
30
208
9.8K
Siddaramaiah
Siddaramaiah@siddaramaiah·
ಇಂದಿರಾ ಲಂಕೇಶ್ ಪ್ರಕಾಶನವು ಕೊಂಡಜ್ಜಿ ಬಸಪ್ಪ ಸಭಾಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ "ಪಿ.ಲಂಕೇಶ್ ಅವರ ಟೀಕೆ ಟಿಪ್ಪಣಿ 3 ಭಾಗಗಳ ಪುಸ್ತಕ ಹಾಗೂ ಲಂಕೇಶರ ಕಥೆಗಳ ಆಡಿಯೊ ಬುಕ್ ಬಿಡುಗಡೆಗೊಳಿಸಿದೆ. ಹಿರಿಯ ನಟ ಪ್ರಕಾಶ್ ರೈ, ಸಾಹಿತಿ ನಟರಾಜ್ ಹುಳಿಯಾರ್, ಲೇಖಕಿ-ವಿಮರ್ಷಕಿ ಎಂ.ಎಸ್.ಆಶಾದೇವಿ, ನಿರ್ದೇಶಕ ಟಿ.ಎನ್.ಸೀತಾರಾಮ್, ಇಂದಿರಾ ಲಂಕೇಶ್, ಕವಿತಾ ಲಂಕೇಶ್ ಸೇರಿ ಹಲವು ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
Siddaramaiah tweet mediaSiddaramaiah tweet mediaSiddaramaiah tweet mediaSiddaramaiah tweet media
ಕನ್ನಡ
6
19
138
3.7K
Siddaramaiah
Siddaramaiah@siddaramaiah·
ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ, ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ಭೂ ಸ್ವಾಧೀನಗೊಳ್ಳುವ ಜಮೀನುಗಳಿಗೆ ಒಪ್ಪಂದದ ದರದಂತೆ ಪರಿಹಾರ ವಿತರಣೆ ಸಮಾರಂಭದ ಕುರಿತ ಪತ್ರಿಕಾ ವರದಿಗಳು #ಕನ್ನಡಸುದ್ದಿ
Siddaramaiah tweet mediaSiddaramaiah tweet mediaSiddaramaiah tweet mediaSiddaramaiah tweet media
ಕನ್ನಡ
3
12
43
1.7K